ನವದೆಹಲಿ, ಅ 09 (DaijiworldNews/SM): ಭಾರತ ತಂಡದ ಕೂಲ್ ಕ್ಯಾಪ್ಟನ್ ಆಗಿದ್ದ ಮಹೇಂದ್ರ ಸಿಂಗ್ ಧೋನಿ ಇದೀಗ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದು ಹಲವಾರು ಚರ್ಚೆಗೆ ಕಾರಣವಾಗುತ್ತಿದೆ. ಈ ನಡುವೆ ಧೋನಿಯವರು ಮರಳಿ ಬರಳು ಬಯಸುತ್ತಾರಾ ಇಲ್ಲವೋ ಎಂಬುವುದು ಅವರ ನಿರ್ಧಾರದ ಮೇಲೆ ಅವಲಂಬಿಸಿದೆ ಎಂದು ಟಿಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಹೇಳಿಕೆ ನೀಡಿದ್ದಾರೆ.
ಕಳೆದ ಮೇ ತಿಂಗಳಲ್ಲಿ ನಡೆದ ಐಸಿಸಿ ವಿಶ್ವಕಪ್ ಬಳಿಕ ಧೋನಿ ಅವರು ತಾವಾಗಿಯೇ ವಿಶ್ರಾಂತಿ ಪಡೆದುಕೊಂಡು ಎರಡು ತಿಂಗಳ ಕಾಲ ದೇಶ ಸೇವೆಯತ್ತ ಮುಖ ಮಾಡಿದ್ದರು. ಅದರ ಬಳಿಕ ಅವರು ಕ್ರಿಕೆಟ್ ಗೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುಮಾರು ಐದು ತಿಂಗಳಾಗುತ್ತಿದ್ದರೂ, ಧೋನಿ ಟೀಂ ಇಂಡಿಯಾಕ್ಕೆ ಮರಳಿ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಹತ್ತು ಹಲವು ಚರ್ಚೆಗಳು ನಡೆಯುತ್ತಿದೆ.
ಕೆಲವರು ಧೋನಿ ಮತ್ತೆ ಟೀಂ ಇಂದಿಯಾವನ್ನು ಸೇರಿಕೊಳ್ಳುವುದಿಲ್ಲ ಎನ್ನುತ್ತಿದ್ದಾರೆ. ಇನ್ನು ಕೆಲವರು, ಆಯ್ಕೆ ಸಮಿತಿಯವರ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎನ್ನುತ್ತಿದ್ದಾರೆ. ಆದರೆ ಇದೀಗ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಪ್ರತಿಕ್ರಿಯೆ ನೀಡಿದ್ದು, ಧೋನಿ ಟೀಂ ಇಂದಿಯಾಕ್ಕೆ ಮರಳುವುದು ಅವರ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.
ಇಂಗ್ಲೆಂಡ್ ನಲ್ಲಿ ನಡೆದ ವಿಶ್ವಕಪ್ ಟೂರ್ನಿ ಬಳಿಕ ಎಂಎಸ್ ಧೋನಿ ಕ್ರಿಕೆಟ್ ಬ್ಯಾಟ್ ಮುಟ್ಟಿಲ್ಲ.