ಕೋಲ್ಕತಾ, ಅ 18 (DaijiworldNews/SM): ಭಯೋತ್ಪಾದಕ ಚಟುವಟಿಕೆ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷಿಯ ಕ್ರಿಕೆಟ್ ಸರಣಿಯನ್ನು ರದ್ದುಗೊಂಡಿದೆ. ಭಯೋತ್ಪಾದನ ಚಟುವಟಿಕೆ ನಿಲ್ಲಿಸಿದ ಹೊರತು ಕ್ರಿಕೆಟ್ ಸರಣಿಗೆ ಸಮ್ಮತಿಸುವುದಿಲ್ಲ ಎಂದು ಈಗಾಗಲೇ ಭಾರತ ಹೇಳಿದೆ. ಈ ಬಗ್ಗೆ ಬಿಸಿಸಿಐನ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಗಂಗೂಲಿ ಪ್ರತಿಕ್ರಿಯೆ ನೀಡಿದ್ದು ಈ ವಿಚಾರವನ್ನು ಉಭಯ ದೇಶಗಳ ಪ್ರಧಾನಿಗಳು ನಿರ್ಧರಿಸಲಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ವಿಚಾರವಾಗಿ ಭಾರತ ಹಾಗೂ ಪಾಕಿಸ್ತಾನದ ಪ್ರಧಾನಿಗಳನ್ನು ಪ್ರಶ್ನಿಸಿ. ಈ ವಿಚಾರವನ್ನು ಅವರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ಈ ವಿಚಾರವನ್ನು ಬಿಸಿಸಿಐ ಏಕಪಕ್ಷೀಯವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಇದಕ್ಕೆ ಕೇಂದ್ರ ಸರಕಾರದ ಒಪ್ಪಿಗೆ ಅಗತ್ಯವಾಗಿದೆ. ಇದು ಎರಡು ರಾಷ್ಟ್ರಗಳ ನಡುವಿನ ವಿಚಾರವಾಗಿದ್ದು, ಈ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಪುಲ್ವಾಮದಲ್ಲಿ ನಡೆದ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಬಿಗಡಾಯಿಸಿದೆ. ಇದೇ ಕಾರಣದಿಂದಾಗಿ ಉಭಯ ರಾಷ್ಟ್ರಗಳ ತಂಡಗಳ ನಡುವೆ ಕ್ರಿಕೆಟ್ ಪಂದ್ಯಕ್ಕೆ ವಿರೋಧ ವ್ಯಕ್ತವಾಗಿ ಮುಂದೆ ಪಂದ್ಯ ನಡೆಸುವುದಿಲ್ಲ ಎಂದು ಭಾರತ ಹೇಳಿದೆ. ಇದು ಎರಡು ರಾಷ್ಟ್ರಗಳ ನಡುವಿನ ಆಂತರಿಕ ವಿಚಾರವಾಗಿದ್ದು, ಉಭಯ ದೇಶದ ನಾಯಕರು ನಿರ್ಧರಿಸಲಿದ್ದಾರೆ ಎಂದು ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.