ಮೆಲ್ಬೋರ್ನ್, ನ 14 (DaijiworldNews/SM): ಭಾರತ ಕ್ರಿಕೆಟ್ ಕಂಡ ಹಿರಿಯ ಆಟಗಾರ ಆಫ್-ಸ್ಪಿನ್ನರ್ ಹರಭಜನ್ ಸಿಂಗ್ ಅವರ ಬೌಲಿಂಗ್ ಅತ್ಯಂತ ಕಠಿಣವಾಗಿತ್ತು ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಹಾಗೂ ಆರಂಭಿಕ ಬ್ಯಾಟ್ಸ್ಮನ್ ಆಡಂ ಗಿಲ್ಕ್ರಿಸ್ಟ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
2001ರಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದ ನೆನಪುಗಳನ್ನು ಅವರು ಮಾಧ್ಯಮದ ಜತೆಗೆ ಹಂಚಿಕೊಂಡಿದ್ದಾರೆ. ಈ ಸರಣಿಯನ್ನು ಸ್ಟೀವ್ ವಾ ಅವರ ನಾಯಕತ್ವದ ಆಸ್ಟ್ರೇಲಿಯಾ ವಶಕ್ಕೆ ಪಡೆದುಕೊಂಡಿತ್ತು. ಅಂದು ಮುಂಬೈನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಗಿಲ್ಕ್ರಿಸ್ಟ್ ಶತಕ ಸಿಡಿಸಿದ್ದರು. ಈ ಬಗ್ಗೆ ಮಾತನಾಡಿರುವ ಅವರು ಹರ್ಭಜನ್ ಸಿಂಗ್ ಅವರ ಬೌಲಿಂಗ್ ಬಗ್ಗೆ ಮಾತನಾಡಿದ್ದಾರೆ.
ಹರ್ಭಜನ್ ಸಿಂಗ್ ಅವರ ಬೌಲಿಂಗ್ ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಬ್ಯಾಟಿಂಗ್ ನಡೆಸುವ ತಂಡಕ್ಕೆ ಕಠಿಣ ಸವಾಲಾಗಿತ್ತು ಎಂದಿದ್ದಾರೆ.