ಚೆನ್ನೈ, ಡಿ 15 (DaijiworldNews/SM): ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಂಡೀಸ್ ತಂಡ ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದೆ. ಆ ಮೂಲಕ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಕನ್ನಡಿಗ ರಾಹುಲ್ ಕೇವಲ 6 ರನ್ ಗಳಿಸಿ ನಿರ್ಗಮಿಸಿದರು. ಬಳಿಕ ವಿರಾಟ್ ಕೊಹ್ಲಿ ಕೂಡ ಕೇವಲ 4 ರನ್ ಗಳಿಸಲಷ್ಟೇ ಶಕ್ತರಾದರು. ಹಿಟ್ ಮ್ಯಾನ್ ರೋಹಿತ್ ಶರ್ಮಾ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬಳಿಕ ಶ್ರೇಯಸ್ ಐಯರ್ 70 ರನ್ ಗಳು ಹಾಗೂ ರಿಶಬ್ ಪಂತ್ 71 ರನ್ ಗಳಿಸಿ ತಂಡಕ್ಕೆ ನೆರವಾದರು. ಅಂತಿಮವಾಗಿ ೫೦ ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 287 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಭಾರತ ನೀಡಿರುವ ಸಾಧಾರಣ ಮೊತ್ತ ಬೆನ್ನಟ್ಟಿದ ವಿಂಡೀಸ್ ತಂಡಕ್ಕೆ ಆರಂಭಿಕರು ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ನೆರವಾದರು. ಶಯಿ ಹೊಪ್ ಔಟಾಗದೆ 102 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು. ಇನ್ನು ಸಿಮ್ರೊನ್ ಅವರ ಭರ್ಜರಿ ಶತಕದ ನೆರವಿನಿಂದ ವಿಂಡೀಸ್ ತಂಡ ಗೆಲುವಿನ ತಂಡ ಸೇರುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ 47.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡ ವಿಂಡೀಸ್ ತಂಡ ಗೆಲುವಿನ ಕೇಕೆ ಹಾಕಿತು.