ಮುಂಬೈ,ನ.19 (DaijiworldNews/AK): ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯು ಇಂದಿನಿಂದ (ನ.19) ಶುರುವಾಗಲಿದೆ. ಕತಾರ್ನ ದೋಹಾದಲ್ಲಿ ನಡೆಯಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ್ ‘ಎ’ ಮತ್ತು ಹಾಂಗ್ ಕಾಂಗ್ ತಂಡಗಳು ಮುಖಾಮುಖಿಯಾಗಲಿವೆ.

ಇನ್ನು ಭಾರತ ‘ಎ’ ತಂಡವು ನಾಳೆ (ನ.20) ನೇಪಾಳ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ .
ಭಾರತ ಎ vs ಪಾಕಿಸ್ತಾನ್ ಎ ನಡುವಣ ಹೈವೋಲ್ಟೇಜ್ ಪಂದ್ಯವು ವೆಸ್ಟ್ ಎಂಡ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಕತಾರ್ ನಲ್ಲಿ ಭಾನುವಾರ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30 ಕ್ಕೆ ಶುರುವಾಗಲಿದೆ.
ಭಾರತ ‘ಎ’ ತಂಡ: ತಿಲಕ್ ವರ್ಮಾ (ನಾಯಕ), ಆಯುಷ್ ಬದೋನಿ, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ರಿಂಕು ಸಿಂಗ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಸೂರ್ಯಾಂಶ್ ಶೆಡ್ಗೆ, ಶಹಬಾಝ್ ಅಹ್ಮದ್, ವಿಪ್ರಜ್ ನಿಗಮ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್ ಮತ್ತು ಅರ್ಷದ್ ಖಾನ್.
ಪಾಕಿಸ್ತಾನ ‘ಎ’ ತಂಡ: ಅಬ್ದುಲ್ ಸಮದ್ (ನಾಯಕ), ಅಹ್ಮದ್ ದಾನಿಯಾಲ್, ಆಕಿಫ್ ಜಾವೇದ್, ಡ್ಯಾನಿಶ್ ಅಝೀಝ್, ಫರ್ಹಾನ್ ಯೂಸುಫ್, ಹೈದರ್ ಅಲಿ, ಹಸನ್ ನವಾಝ್, ಮಾಝ್ ಸದಾಕತ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ಇಮ್ರಾನ್ ರಾಂಧವಾ, ರೋಹೈಲ್ ನಝೀರ್ (ವಿಕೆಟ್ ಕೀಪರ್), ಸಾದ್ ಮಸೂದ್, ಶಹಝೈಬ್ ಖಾನ್, ಶಮಿಲ್ ಹುಸೇನ್ ಮತ್ತು ಸುಫ್ಯಾನ್ ಮೊಕಿಮ್.