ಕ್ರೈಸ್ಟ್ಚರ್ಚ್, ಮಾ 01 (DaijiworldNews/SM): ಬ್ಯಾಟಿಂಗ್ ವಿಭಾಗದ ವೈಫಲ್ಯದಿಂದಾಗಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿದೆ. ಪ್ರಸ್ತುತ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಗಳು ತಮ್ಮ ಸಾಮಾರ್ಥ್ಯ ಪ್ರದರ್ಶನಕ್ಕೆ ವಿಫಲರಾಗಿದ್ದಾರೆ. ಆ ಮೂಲಕ ಪ್ರಮುಖ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ, ಕೆ.ಎಲ್. ರಾಹುಲ್ ಅನುಪಸ್ಥಿತಿ ಎದ್ದು ಕಾಣುತ್ತಿದೆ.
ಪ್ರಥಮ ಇನಿಂಗ್ಸ್ನಲ್ಲಿ ನ್ಯೂಜಿಲೆಂಡ್ ತಂಡವನ್ನು 235 ರನ್ಗಳಿಗೆ ಕಟ್ಟಿ ಹಾಕಿದ ಟೀಮ್ ಇಂಡಿಯಾ ಏಳು ರನ್ಗಳ ಮುನ್ನಡೆ ಗಳಿಸಿತ್ತು. ಆದರೆ, ದ್ವಿತೀಯ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 90 ರನ್ಗಳಿಗೆ ಆರು ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದೆ.
ಎರಡೇ ದಿನಕ್ಕೆ ಪಂದ್ಯದ ಎರಡನೇ ಇನ್ನಿಂಗ್ಸ್ ನಡೆಯುವ ಮೂಲಕ ಎರಡು ತಂಡಗಳು ವೈಫಲ್ಯ ಅನುಭವಿಸಿದೆ. 5 ರನ್ ಗಳಿಸಿರುವ ಹನುಮಾನ್ ವಿಹಾರಿ ಹಾಗೂ 1 ರನ್ ಗಳಿಸಿರುವ ರಿಷಬ್ ಪಂತ್ ಮೂರನೇ ದಿನಕ್ಕೆ ಇನ್ನಿಂಗ್ಸ್ ಮುಂದುವರೆಸಲಿದ್ದಾರೆ. ಎರಡನೇ ದಿನವಾದ ಭಾನುವಾರದಂದು ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಮಾಯಾಂಕ್ ಅಗರ್ ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಸೇರಿದಂತೆ ಪ್ರಮುಖರ ವೈಫಲ್ಯದಿಂದ ಕೇವಲ 90 ರನ್ಗಳಿಗೆ ಭಾರತ ಕುಸಿದಿದೆ. ಆ ಮೂಲಕ ಪಂದ್ಯದ ಮೇಲಿರುವ ಒಂದಿಷ್ಟು ಭರವಸೆ ಕಳೆದುಕೊಳ್ಳುವಂತಾಗಿದೆ. ಶರಣಿಯನ್ನು ಕೂಡ ಭಾರತ ಕೈ ಚೆಲ್ಲುವ ಲಕ್ಷಣಗಳು ಗೋಚರಿಸುತ್ತಿವೆ.
ಇನ್ನುಳಿದ ಆಟಗಾರರು ಜವಾಬ್ದಾರಿಯುತ ಆಟವಾಡಿ ಬೌಲಿಂಗ್ ವಿಭಾಗವನ್ನು ಭದ್ರಗೊಳಿಸಿ ನ್ಯೂಜಿಲ್ಯಾಂಡ್ ತಂಡವನ್ನು ಕಟ್ಟಿ ಹಾಕಿದ್ದಲ್ಲಿ ಸರಣಿಯನ್ನು ಸಮಬಲಗೊಳಿಸಬಹುದಾಗಿದೆ.