ಮುಂಬೈ, ಮಾ 29 (DaijiworldNews/SM): ಕೊರೊನಾ ವಿರುದ್ಧದ ದೇಶದೆಲ್ಲೆಡೆ ಸಮರ ಸಾರಲಾಗುತ್ತಿದೆ. ವೈರಸ್ ನಿಯಂತ್ರಣಕ್ಕೆ ದೇಶವೇ ಅಣಿಯಾಗಿದೆ. ದೇಶದ ಹೋರಾಟಕ್ಕೆ ಸಹಾಯ ಮಾಡಲು ಪ್ರಧಾನ ಮಂತ್ರಿ ತುರ್ತು ಪರಿಸ್ಥಿತಿಗಳ ನಿಧಿಗೆ 51 ಕೋಟಿ ರೂಪಾಯಿಗಳ ನೆರವು ನೀಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದಾಗಿದೆ.
ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಗೌರವ ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಅಂಗಸಂಸ್ಥೆ ರಾಜ್ಯ ಸಂಘಗಳು ಪ್ರಧಾನ ಮಂತ್ರಿ ಪರಿಹಾರ ನೀಡಿದೆ 51 ಕೋಟಿ ರೂ.ಗಳನ್ನು ನೀಡಿದ್ದಾರೆ. ಆ ಮೂಲಕ ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಬಿಸಿಸಿಐ ಮುಂದಾಗಿದೆ. ಹಾಗೂ ತನ್ನಲ್ಲಾದ ಸಹಾಯವನ್ನು ಮಾಡಿದೆ.
ಮಾನವಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದೆ. ಈ ನಿಟ್ಟಿನಲ್ಲಿ ವೈರಸ್ ನಿಯಂತ್ರಣಕ್ಕೆ ತರಲು ಸರಕಾರದೊಂದಿಗೆ ಸಹಕಾರ ನೀಡುವುದು ಅಗತ್ಯವಾಗಿದೆ. ಇದೀಗ ಬಿಸಿಸಿಐ ಕೈಗೊಂಡಿರುವ ಕ್ರಮಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿತ್ತಿದೆ.