ಅಬುಧಾಬಿ, ಸೆ. 24 (DaijiworldNews/SM): ಹದಿಮೂರನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲ ಶತಕವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಬೆಂಗಳೂರು ತಂಡದ ವಿರುದ್ಧ ಸಿಡಿಸಿ ಅಬ್ಬರಿಸಿದ್ದಾರೆ.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಹಾಗೂ ಪಂಜಾಬ್ ತಂಡಗಳ ನಡುವಿನ ಪಂದ್ಯದಲ್ಲಿ ಪಂಬಾಜ್ ತಂಡದ ನಾಯಕ ಹಾಗೂ ಕನ್ನಡಿಗ ರಾಹುಲ್ ಅಜೇಯ 132 ರನ್ ಗಳನ್ನು ಸಿಡಿಸಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಯಲ್ಪಟ್ಟ ಪಂಜಾಬ್ ತಂಡದ ಪರ ಆರಂಭಿಕ ಹಾಗೂ ತಂಡದ ನಾಯಕ ಕೆ.ಎಲ್. ರಾಹುಲ್ ಆರಂಭದಿಂದಲೂ ಅಬ್ಬರದ ಆಟವನ್ನೇ ತೋರಿದರು. ಕೇವಲ 69 ಎಸೆತಗಳನ್ನು ಎದುರಿಸಿದ ರಾಹುಲ್ 14 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಗಳ ನೆರವಿನಿಂದ 132 ರನ್ ಸಿಡಿಸಿ ಅಜೇಯರಾಗಿ ಉಳಿದರು. ಅಲ್ಲದೆ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸಿದರು.
ಇದು ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲ ಶತಕವಾಗಿದ್ದು, ಐಪಿಎಲ್ ನಲ್ಲಿ ರಾಹುಲ್ ಸಿಡಿಸಿದ ಎರಡನೇ ಶತಕವಾಗಿದೆ.