ಸಿಡ್ನಿ, ಜ. 06 (DaijiworldNews/MB) : ಆಸ್ಟ್ರೇಲಿಯಾ ವಿರುದ್ಧ ಗುರುವಾರ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ತಂಡ ಪ್ರಕಟಗೊಂಡಿದೆ.
ಮಯಾಂಕ್ ಅಗರವಾಲ್ ಬದಲಿಗೆ ರೋಹಿತ್ ಶರ್ಮಾ ಆರಂಭಿಕನಾಗಿ ಆಡಳಿದ್ದು, ನವದೀಪ್ ಸೈನಿ ತಂಡ ಸೇರಲಿದ್ದಾರೆ.
ಮೊದಲ ಟೆಸ್ಟ್ ಪಂದ್ಯ ಸೋತು ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಭಾರತ ತಂಡವು ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದೆ.
ಇನ್ನು ಗುರುವಾರ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಆಡಳಿರುವ ರೋಹಿತ್ ಶರ್ಮಾ ಕಳೆದ ಅಕ್ಟೋಬರ್ನಲ್ಲಿ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಗಾಯಗೊಂಡಿದ್ದರು. ಬಳಿಕ ವಿಶ್ರಾಂತಿ ಪಡೆದು, ಆಸ್ಟ್ರೇಲಿಯಾ ತೆರಳಿ 14 ದಿನಗಳ ಕ್ವಾರಂಟೈನ್ ಮುಗಿಸಿದ್ದಾರೆ.
ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಹನುಮವಿಹಾರಿ, ರಿಷಬ್ ಪಂತ್, ರವೀಂದ್ರ ಜಡೇಜ, ಆರ್. ಅಶ್ವಿನ್, ಜಸಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ ಇರಲಿದ್ದಾರೆ.