ದುಬೈ, ಜ 27 (DaijiworldNews/SM): ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಏಕದಿನ ರ್ಯಾಂಕಿಂಗ್ ನ ನೂತನ ಪಟ್ಟಿ ಬಿಡುಗಡೆಗೊಳಿಸಿದೆ. ಅದರಲ್ಲಿ ಮತ್ತೆ ಟೀಂ ಇಂಡೀಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 870 ಅಂಕಗಳನ್ನು ಹೊಂದಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ(842) ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 89 ಮತ್ತು 63 ರನ್ ಬಾರಿಸಿದ್ದರು. ಪಾಕಿಸ್ತಾನ ನಾಯಕ ಬಾಬರ್ ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನುಳಿದಂತೆ ನ್ಯೂಜಿಲೆಂಡ್ನ ರಾಸ್ ಟೇಲರ್(818) ಮತ್ತು ಆಸ್ಟ್ರೇಲಿಯಾದ ನಾಯಕ ಆರನ್ ಫಿಂಚ್ (791) ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಮೊದಲ ಐದು ಸ್ಥಾನಗಳಲ್ಲಿದ್ದಾರೆ.
ಇನ್ನು ಬೌಲಿಂಗ್ನಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ 700 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.