ಕೋಲ್ಕತ್ತಾ, ಜ 29 (DaijiworldNews/SM): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಮುಖ್ಯಸ್ಥ ಸೌರವ್ ಗಂಗೂಲಿ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಿಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಶುಕ್ರವಾರ ಸಹ ವೈದ್ಯರು ಗಂಗೂಲಿಯವರಿಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ್ದಾರೆ. ಗುರುವಾರದಂದು ಮತ್ತೊಂದು ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಅಲ್ಲದೆ ಇನ್ನೂ ಎರಡು ಸ್ಟೆಂಟ್ಗಳನ್ನು ಅಳವಡಿಸಲಾಗಿದೆ.
ಪ್ರಸ್ತುತ ಸೌರವ್ ಗಂಗೂಲಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ರಾತ್ರಿ ಅವರಿಗೆ ಉತ್ತಮ ನಿದ್ರೆ ಬಂದಿತ್ತು. ಅವರ ಎಲ್ಲಾ ಪ್ರಮುಖ ಆರೋಗ್ಯ ನಿಯತಾಂಕಗಳು ಸಾಮಾನ್ಯ ಸ್ಥಿತಿಯಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.