ಕಾನ್ಪುರ, ಮೇ.19 (DaijiworldNews/PY): ಕೊರೊನಾ ಲಸಿಕೆ ಹಾಕಿಸಿಕೊಂಡ ಫೋಟೋವನ್ನು ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಟೀಂ ಇಂಡಿಯಾದ ಬೌಲರ್ ಕುಲದೀಪ್ ಯಾದವ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕುಲದೀಪ್ ಯಾದವ್ ಅವರು ತಮ್ಮ ಗೆಸ್ಟ್ಹೌಸ್ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಕಾನ್ಪುರ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.
"ನಾನು ಕೊರೊನಾದ ಮೊದಲ ಡೋಸ್ ಹಾಕಿಸಿಕೊಂಡಿದ್ದೇನೆ. ನೀವೂ ಲಸಿಕೆ ಹಾಕಿಸಿಕೊಳ್ಳಿ. ಕೊರೊನಾ ವಿರುದ್ದ ಹೋರಾಡಲು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವುದು ಮುಖ್ಯ" ಎಂದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದರು.
ಕೊರೊನಾ ಮಾರ್ಗಸೂಚಿ ಪಾಲಿಸುವ ಬದಲಾಗಿ ವಿಐಪಿಗೆ ವಿಶೇಷ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕಾನ್ಪುರ ಮ್ಯಾಜಿಸ್ಟ್ರೇಟ್ ಅಲೋಕ್ ತಿವಾರಿ ತನಿಖೆಗೆ ತನಿಖೆಗೆ ಆದೇಶಿಸಿದ್ದಾರೆ.
"ಈ ರೀತಿಯಾಗಿ ಮನೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವುದು ನಿಯಮ ಬಾಹಿರ" ಎಂದಿದ್ದಾರೆ.