ಮುಂಬೈ, ಮೇ 25 (DaijiworldNews/SM): ದೇಶದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾದ ಹಿನ್ನೆಲೆಯಲ್ಲಿ ಹಾಗೂ ಕೆಲವು ಆಟಗಾರರಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳನ್ನು ರದ್ದುಗೊಳಿಸಲಾಗಿತ್ತು. ಆದರೆ, ಇದೀಗ ಉಳಿದ ಪಂದ್ಯಗಳನ್ನು ಸಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ನಡೆಸುವ ಸಾಧ್ಯತೆ ಇದೆ.
ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ 14ನೇ ಆವೃತ್ತಿಯಲ್ಲಿ ಉಳಿದಿರುವ ಪಂದ್ಯಗಳನ್ನು ನಡೆಸಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಉಳಿದಿರುವ ಪಂದ್ಯಗಳಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ವೇಳಾಪಟ್ಟಿ ಹೊರಬರುವ ಸಾಧ್ಯತೆ ಇದೆ. ಇದರಲ್ಲಿ 10 ಡಬಲ್ ಹೆಡರ್ ಪಂದ್ಯಗಳು, ಏಳು ಸಿಂಗಲ್ಸ್ ಪಂದ್ಯಗಳು ಹಾಗೂ 4 ಮುಖ್ಯ ಪಂದ್ಯಗಳನ್ನು ಒಳಗೊಂಡಿರುವ ಸಾಧ್ಯತೆ ಇದೆ.
ಈ ಬಗ್ಗೆ ಬಿಸಿಸಿಐ ಅಧಿಕೃತ ಹೇಳಿಕೆ ಬಿಡುಗಡೆಗೊಳಿಸಬೇಕಿದೆ. ಲೀಗ್ನ ಅಂತಿಮ ತೀರ್ಮಾನವನ್ನು ಮೇ 29 ರಂದು ನಡೆಯಲಿರುವ ವಿಶೇಷ ಸಾಮಾನ್ಯ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ.