ಪ್ಯಾರಿಸ್, ಜೂ. 06(DaijiworldNews/SM): ಟೆನ್ನಿಸ್ ಟೂರ್ನಾಮೆಂಟ್ ನ ದಾಖಲೆಯ ವಿಜೇತ ರೋಜರ್ ಫೆಡರರ್ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯಿಂದ ಹೊರ ನಡೆದಿದ್ದಾರೆ.
20 ಬಾರಿಯ ಗ್ರ್ಯಾನ್ಸ್ಲಾಮ್ ಚಾಂಪಿಯನ್ ಆಗಿರುವ ಸ್ವಿಜರ್ಲೆಂಡ್ನ ರೋಜರ್ ಫೆಡರರ್ ಸದ್ಯ ಟೂರ್ನಿಯಿಂದ ಹೊರ ಬಂದಿದ್ದು, ಅಚ್ಚರಿಗೆ ಕಾರಣವಾಗಿದೆ. ಈ ಟೂರ್ನಿಯಲ್ಲಿ ಅವರು ಈಗಾಗಲೇ ನಾಲ್ಕನೇ ಸುತ್ತು ಪ್ರವೇಶಿಸಿದ್ದರು. ಆದಾಗ್ಯೂ ಟೂರ್ನಿಯಿಂದ ಹೊರ ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.
ಗಾಯದ ಸಮಸ್ಯೆಯಿಂದಾಗಿ ಫೆಡರರ್ ಟೂರ್ನಿಯಿಂದ ಹೊರ ಬರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ ಆದರೆ, ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಮೊಣಕಾಲಿನ ಶಸ್ತ್ರಚಿಕಿತ್ಸೆಯ ಬಳಿಕ ಕಳೆದ ಮೂರು ವರ್ಷಗಳಲ್ಲಿ ಫೆಡರರ್, ಆರು ಪಂದ್ಯಗಳನ್ನಷ್ಟೇ ಆಡಿದ್ದಾರೆ.