ಟೋಕಿಯೊ, ಆ.07 (DaijiworldNews/HR): ಟೋಕಿಯೊ ಒಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಭಾರತಕ್ಕೆ ಬಂಗಾರದ ಪದಕ ಗೆದ್ದು ಕೊಟ್ಟಿದ್ದಾರೆ.
ನೀರಜ್ ಚೋಪ್ರಾ ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದ್ದು, ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದು, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದಿದ್ದು, ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.
ಇನ್ನು ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿದ್ದು, 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.