ನವದೆಹಲಿ, ಆ.09 (DaijiworldNews/HR): ಟೋಕಿಯೋ ಒಲಿಂಪಿಕ್ಸ್ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಅಥ್ಲೀಟ್ ನೀರಜ್ ಚೋಪ್ರ ಮದುವೆ ವಿಚಾರವಾಗಿ ಮಾತನಾಡಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯ ಸಂದರ್ಶನದಲ್ಲಿ 1983 ವಿಶ್ವಕಪ್ ಕ್ರಿಕೆಟ್ ವಿಜೇತ ತಂಡದ ನಾಯಕನಾಗಿದ್ದ ಕಪಿಲ್ ದೇವ್ ಅವರು ನೀರಜ್ ಮದುವೆ ಯೋಜನೆ ಬಗ್ಗೆ ಪ್ರಶ್ನಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ನೀರಜ್, "ನನ್ನ ಸಂಪೂರ್ಣ ಗಮನವನ್ನು ಕ್ರೀಡೆ ಕಡೆ ಹರಿಸಿದ್ದೇನೆ. ಮದುವೆ ಹಾಗೂ ಇತರೆ ವಿಚಾರಗಳು ಸರಿಯಾದ ಸಮಯಕ್ಕೆ ನಡೆಯುತ್ತದೆ" ಎಂದು ನಾಚಿ ನೀರಾಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.
ಇನ್ನು ಕ್ರೀಡೆಯಲ್ಲಿಯೇ ನನ್ನ ಸಂಪೂರ್ಣ ಗಮನ ಇರಲಿದ್ದು, ಇದಕ್ಕಾಗಿ ನಾನು ಸಾಕಷ್ಟು ಕಠಿಣ ಪರಿಶ್ರಮ ಪಡುತ್ತೇನೆ ಎಂದು ಹೇಳಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ 13 ವರ್ಷಗಳ ಬಳಿಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಾರೆ.