ನವದೆಹಲಿ, ಆ 14 (DaijiworldNews/PY): ಟೊಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರು ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಈ ಹಿನ್ನೆಲೆ ಅವರು ಹರಿಯಾಣ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿಲ್ಲ.
"ವೈದ್ಯರ ಸಲಹೆಯ ಮೇರೆಗೆ ಕೊರೊನಾ ಪರೀಕ್ಷೆ ಮಾಡಿದ್ದು, ವರದಿ ನೆಗೆಟಿವ್ ಆಗಿದೆ. ನೀರಜ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ" ಎಂದು ನೀರಜ್ ಚೋಪ್ರಾ ಅವರ ನಿಕಟವರ್ತಿಯೋರ್ವರು ತಿಳಿಸಿದ್ದಾರೆ.
"ನಿನ್ನೆವರೆಗೆ ನೀರಜ್ ತೀವ್ರ ಜ್ವರದಿಂದ ಬಳಲುತ್ತಿದ್ದರು. ಆದರೆ, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆವರ ಕೊರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ. ವೈದ್ಯರು ಅವರಿಗೆ ವಿಶ್ರಾಂತಿ ಪಡೆದುಕೊಳ್ಳಲು ಸೂಚಿಸಿದ್ದಾರೆ. ಅವರು ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದ್ದು, ಹಾಗಾಗಿ ಅನಾರೋಗ್ಯಕ್ಕೊಳಗಾಗಿದ್ದಾರೆ" ಎಂದು ಹೇಳಿದ್ದಾರೆ.
"ನೀರಜ್ ಅವರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಬೇಕಿದ್ದು, ಅವರು ನೇರವಾಗಿ ರಾಷ್ಟ್ರಪತಿ ಭವನಕ್ಕೆ ಬರಲಿದ್ದಾರೆ. ಉಳಿದ ಆಟಗಾರರು ಅಶೋಕ್ ಹೋಟೆಲ್ನಲ್ಲಿ ಇದ್ದಾರೆ" ಎಂದು ತಿಳಿಸಿದ್ದಾರೆ.