ನವದೆಹಲಿ, ಸೆ.13 (DaijiworldNews/PY): "ವಿರಾಟ್ ಕೊಹ್ಲಿ ಅವರೇ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿಯೂ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ" ಎಂದು ಬಿಸಿಸಿಐ ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಖಜಾಂಜಿ ಅರುಂಣ್ ಧುಮಲ್, "ವಿರಾಟ್ ಕೊಹ್ಲಿ ಅವರು ಐಸಿಸಿ ಟಿ20 ವಿಶ್ವಕಪ್ ಬಳಿಕ ಸೀಮಿತ ಓವರ್ ಕ್ರಿಕೆಟ್ನಲ್ಲಿ ಭಾರತ ತಂಡದ ನಾಯಲತ್ವ ತೊರೆಯಲಿದ್ದಾರೆ. ರೋಹಿತ್ ಶರ್ಮಾ ಅವರು ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಈ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ" ಎಂದು ತಿಳಿಸಿದ್ದಾರೆ.
"ಮಾಧ್ಯಮಗಳ ವರದಿ ಸತ್ಯವಲ್ಲ. ಬಿಸಿಸಿಐ, ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಭಾರತ ತಂಡದ ನಾಯಕತ್ವ ಬದಲಾವಣೆ ಮಾಡುವ ಬಗ್ಗೆ ಯಾವುದೇ ರೀತಿಯಾದ ಸಭೆ ನಡೆಸಿಲ್ಲ. ಅಲ್ಲದೇ, ಚರ್ಚೆ ಕೂಡಾ ನಡೆಸಿಲ್ಲ" ಎಂದು ಧುಮಲ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
"ಟೆಸ್ಟ್ ಕ್ರಿಕೆಟ್ನ ನಾಯಕತ್ವದಲ್ಲಿ ವಿರಾಟ್ ಕೊಹ್ಲಿ ಅವರು ಯಶಸ್ವಿಯಾಗಿದ್ದಾರೆ. ಉತ್ತಮವಾದ ಬ್ಯಾಟ್ಸ್ಮನ್ ಹಾಗೂ ಬೌಲರ್ಗಳ ತಂಡವನ್ನು ಹೊಂದಿದ್ದರೂ ಕೂಡಾ ಏಕದಿನ ಹಾಗೂ ಟಿ20 ಕ್ರಿಕೆಟ್ನಲ್ಲಿ ಐಸಿಸಿ ಟೂರ್ನಿಗಳಲ್ಲಿ ತಂಡವನ್ನು ಗೆಲ್ಲಿಸುವುದು ವಿರಾಟ್ ಕೊಹ್ಲಿಗೆ ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಅವರು ತಂಡದ ನಾಯಕತ್ವ ವಹಿಸಲಿದ್ದಾರೆ" ಎಂದು ಮಾಧ್ಯಮಗಳು ವರದಿ ಮಾಡಿದ್ದವು.