ದುಬೈ, ಸೆ. 15 (DaijiworldNews/SM): ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ? ಹೀಗೊಂದು ಪ್ರಶ್ನೆ ಕಾಡಲಾರಂಭಿಸಿದೆ. ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಗುರುವಾರ ಘೋಷಿಸಿದ್ದಾರೆ.
ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಟೀಂ ಇಂಡಿಯಾದ ಟಿ-20 ನಾಯಕ ಸ್ಥಾನ ತ್ಯಜಿಸುವುದಾಗಿ ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ. ಆದರೆ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಎಂದಿನಂತೆ ತಂಡವನ್ನು ಮುನ್ನಡೆಸುವುದಾಗಿ ಕೊಹ್ಲಿ ತಿಳಿಸಿದ್ದಾರೆ. ಕೊಹ್ಲಿ ರಾಜೀನಾಮೆ ಬಳಿಕ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
"ಅಕ್ಟೋಬರ್ ತಿಂಗಳಲ್ಲಿ ದುಬೈನಲ್ಲಿ ಟಿ- 20 ವಿಶ್ವಕಪ್ ಟೂರ್ನಮೆಂಟ್ ನಡೆಯಲಿದೆ.