ದೆಹಲಿ, ಅ. 17 (DaijiworldNews/SM):ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹರಿಯಾಣ ಪೊಲೀಸರು ಬಂಧಿಸಿದ್ದು, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ವೀಡಿಯೋ ಸಂದೇಶದ ಸಂದರ್ಭದಲ್ಲಿ ಇನ್ನೊಬ್ಬನ ಬಗ್ಗೆ ಜಾತಿ ನಿಂದನೆಯಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಯುವಿಯವರನ್ನು ಬಂಧಿಸಲಾಗಿತ್ತು. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಹನ್ಸಿ ಮೂಲದ ನಿವಾಸಿಯೊಬ್ಬರು ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್ಸಿ ಎಸ್ಟಿ ಕಾಯ್ದೆಯ ಕೆಲವು ಸೆಕ್ಷನ್ ಅಡಿ ದೂರು ದಾಖಲಾಗಿದೆ. ಇನ್ನೊಂದೆಡೆ ಪೊಲೀಸರು ಯುವಿಯವರ ಫೋನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.