ಯುಎಇ, ಅ. 20 (DaijiworldNews/SM): ಟಿ-20 ವಿಶ್ವ ಕಪ್ ಗೆ ಸಿದ್ಧತೆಗಳು ನಡೆಯುತ್ತಿದ್ದು, ಭಾರತದ ಪರ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ಅಭ್ಯಾಸ ಪಂದ್ಯದ ನಂತರ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದು, ತಾನು ಮೂರನೆಯವನಾಗಿ ಕಣಕ್ಕಿಳಿಯಲಿದ್ದೇನೆ ಎಂದಿದ್ದಾರೆ. ಇದರಿಂದಾಗಿ ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ. ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಆರಂಭಿಕ ಬ್ಯಾಟ್ಸ್ ಮನ್ ಗಳ ಬಳಗವನ್ನು ಟೀಂ ಇಂಡಿಯಾ ಹೊಂದಿದೆ. ಇದರಿಂದಾಗಿ ರೋಹಿತ್ ಶರ್ಮಾ ಅವರ ಜೊತೆಗೆ ಪಂದ್ಯ ಆರಂಭಿಸುವ ಆಟಗಾರ ಯಾರು ಎನ್ನುವ ಪ್ರಶ್ನೆ ಕಾಡಲಾರಂಭಿಸಿತ್ತು. ಮತ್ತೊಂದೆಡೆ, ತಾನೇ ರೋಹಿತ್ ಗೆ ಸಾಥ್ ನೀಡುವುದಾಗಿ ಕೊಹ್ಲಿ ಹೇಳಿದ್ದರು. ಆದರೆ, ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಿದೆ.