ಅಬುದಾಬಿ, ನ. 10 (DaijiworldNews/SM): ಇಲ್ಲಿನ ಶೇಖ್ ಝೈಯದ್ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಗೆದ್ದು ನ್ಯೂಜಿಲ್ಯಾಂಡ್ ತಂಡ ಫೈನಲ್ ಪ್ರವೇಶಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ಗಳ ನಷ್ಟಕ್ಕೆ 166 ರನ್ ಗಳಿಸಿತು. ಇಂಗ್ಲೆಂಡ್ ಪರ ಮೋಯಿನ್ ಅಲಿ 51 ರನ್ ಸಿಡಿಸಿದರು.
ಇನ್ನು ಇದಕ್ಕೆ ಉತ್ತರವಾಗಿ ನ್ಯೂಜಿಲ್ಯಾಂಡ್ ತಂಡ 19 ಓವರ್ ಗಳಲ್ಲಿ ಐದು ವಿಕೆಟ್ ಗಳ ನಷ್ಟಕ್ಕೆ 167 ರನ್ ಗಳಿಸಿ ಗೆಲುವಿನ ನಗೆ ಚೆಲ್ಲಿತು. ನ್ಯೂಜಿಲ್ಯಾಂಡ್ ಪರ ಮಿಚೆಲ್ ಅಜೇಯ 72, ಕನ್ ವೇ 46 ರನ್ ಗಳಿಸಿದರು. ಇನ್ನು ಇಂಗ್ಲೆಂಡ್ ವಿರುದ್ಧ ಗೆಲುವು ದಾಖಲಿಸಿದ ನ್ಯೂಜಿಲ್ಯಾಂಡ್ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ.