ನವದೆಹಲಿ, ನ.14 (DaijiworldNews/PY): ಭಾರತ ತಂಡದ ಮಾಜಿ ಬ್ಯಾಟರ್ ವಿ ವಿ ಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಂದಿನ ಮುಖ್ಯಸ್ಥರಾಗಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿಯೋರ್ವರು ಖಚಿತಪಡಿಸಿದ್ದಾರೆ.
ಲಕ್ಷ್ಮಣ್ ಅವರು ರಾಹುಲ್ ದ್ರಾವಿಡ್ ಅವರ ಸ್ಥಾನವನ್ನು ವಹಿಸಿಕೊಳ್ಳುವರು. ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರವಿ ಶಾಸ್ತ್ರಿ ಅವರ ಅವಧಿ ಇತ್ತೀಚೆಎ ಮುಗಿದ ಕಾರಣ ಆ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲಾಗಿದೆ.
ರವಿ ಶಾಸ್ತ್ರಿ ಅವರು ಎನ್ಸಿಯ ನೂತನ ಮುಖ್ಯಸ್ಥರಾಗಲಿದ್ದಾರೆ ಎಂದು ಹೆಸರು ಬಹಿರಂಗಪಡಿಸಬಾರದು ಎನ್ನುವ ಷರತ್ತಿನ ಮೇಲೆ ಸುದ್ದಿಸಂಸ್ಥೆಗೆ ಹಿರಿಯ ಅಧಿಕಾರಿ ಖಚಿತಪಡಿಸಿದ್ದಾರೆ.
ಲಕ್ಷ್ಮಣ್ ಈಗಾಗಲೇ ಐಪಿಎಲ್ನಲ್ಲಿ ಆಡುವ ಸನ್ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಸ್ಥಾನದಿಂದ ನಿರ್ಗಮಿಸಿದ್ದಾರೆ.
ಡಿಸೆಂಬರ್ 4ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಬಿಸಿಸಿಐನ ವಾರ್ಷಿಕ ಮಹಾಸಭೆಗೆ ಮುನ್ನವೇ ಲಕ್ಷ್ಮಣ್ ಅವರ ನೇಮಕ ಜಾರಿಗೆ ಬರಲಿದೆ. ಭಾರತದ ಇಬ್ಬರು ದಿಗ್ಗಜ ಆಟಗಾರರಾದ ದ್ರಾವಿಡ್ ಹಾಗೂ ವೆಂಕಟಸಾಯಿ ಲಕ್ಷ್ಮಣ್ ಈ ಪ್ರಮುಖ ಹುದ್ದೆಗಳನ್ನು ವಹಿಸಿಕೊಳ್ಳಲಿದ್ದಾರೆ.