ನವದೆಹಲಿ, ನ. 23 (DaijiworldNews/SM): ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ರಾಹುಲ್ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಸೂರ್ಯ ಕುಮಾರ್ ಯಾದವ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಕೆಎಲ್ ರಾಹುಲ್ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಅಭ್ಯಾಸ ಪಂದ್ಯದಲ್ಲಿ ರಾಹುಲ್ ಅವರು ಕಾಣಿಸಿಕೊಂಡಿರಲಿಲ್ಲ. ಅವರು ಗಾಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ರಾಹುಲ್ ಅವರ ಗೈರು ಹಿನ್ನೆಲೆಯಲ್ಲಿ ಅವರ ಸ್ಥಾನದಲ್ಲಿ ಯುವ ಆಟಗಾರ ಸೂರ್ಯ ಕುಮಾರ್ ಯಾದವ್ ಅವರನ್ನು ಆಡುವ ಲಕ್ಷಣಗಳು ಗೋಚರಿಸುತ್ತಿವೆ.