ದೆಹಲಿ, ಜ. 10 (DaijiworldNews/SM): ತನ್ನ ಫಿಟ್ನೆಸ್ ಬಗ್ಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಫಿಟ್ನೆಸ್ ವಿಚಾರದಲ್ಲಿ ವಿರಾಟ್ ಶುಭ ಸುದ್ದಿ ನೀಡಿದ್ದು, ಸಂಪೂರ್ಣ ಫಿಟ್ ಆಗಿದ್ದೇನೆ ಎಂಬುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.
“ನನ್ನ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳು ಏಳುತ್ತಿರುವುದು ಇದೇನು ಮೊದಲಲ್ಲ. 2014ರ ಇಂಗ್ಲೆಂಡ್ ಪ್ರವಾಸದ ವೇಳೆಯೂ ಇದು ನಡೆದಿತ್ತು. ಹೊರಗಿನವರು ಏನು ಹೇಳುತ್ತಾರೆ ಅನ್ನೋದು ನನಗೆ ಮುಖ್ಯವಲ್ಲ" ಎಂದಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದ ವೇಳೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಗಾಯಗೊಂಡಿದ್ದಾರೆ. ಮುಂದಿನ ಟೆಸ್ಟ್ನಲ್ಲಿ ಸಿರಾಜ್ ಬದಲಿಗೆ ಯಾರು ಎಂಬ ಪ್ರಶ್ನೆ ಬಗ್ಗೆ ವಿರಾಟ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಈ ಬಗ್ಗೆ ಕೋಚ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಷ್ಟೇ ತಿಳಿಸಿದರು.