ಅಹಮದಾಬಾದ್, ಫೆ. 02 (DaijiworldNews/SM): ವಿರಾಮದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತೆ ಮೈದಾನಕ್ಕಿಳಿದಿದ್ದು, ಫೆಬ್ರವರಿ 6ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ರೋಹಿತ್ ನಾಯಕನಾಗಿ ತಂಡ ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ 10 ವಾರಗಳ ವಿರಾಮದ ನಂತರ ಮತ್ತೆ ಮೈದಾನಕ್ಕೆ ಮರಳಲಿದ್ದಾರೆ. ಇಲ್ಲಿಯವರೆಗೆ ಕೇವಲ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುತ್ತಿದ್ದ ಹಿಟ್ಮ್ಯಾನ್ಗೆ ನಾಯಕತ್ವದ ರೂಪದಲ್ಲಿ ಹೆಚ್ಚುವರಿ ಜವಾಬ್ದಾರಿಯನ್ನು ಇನ್ಮುಂದೆ ನಿರ್ವಹಿಸಲಿದ್ದಾರೆ.
ವಿಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಟೀಂ ಇಂಡಿಯಾಗೆ 1000 ಪಂದ್ಯಗಳನ್ನು ಆಡಿದಂತಾಗುತ್ತದೆ. ಜೊತೆಗೆ ಏಕದಿನದ ಪಂದ್ಯಗಳಲ್ಲಿ ಒಟ್ಟು ಸಾವಿರ ಪಂದ್ಯಗಳನ್ನು ಪೂರೈಸಿದ ಮೊದಲ ತಂಡವಾಗಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಲಿದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾದ ಪರಿಪೂರ್ಣ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.