ಮುಂಬೈ, ಮಾ.02 (DaijiworldNews/SM): ಟೀಂ ಇಂಡಿಯಾದ ಸ್ಟಾರ್ ಆಟಗಾರ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ 100ನೇ ಟೆಸ್ಟ್ ಗೆ ಪ್ರೇಕ್ಷಕರು ಕಾತರದಲ್ಲಿದ್ದಾರೆ. ಸದ್ಯ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗುವುದೆಂದು ಬಿಸಿಸಿಐ ತಿಳಿಸಿದೆ.
ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮಾಹಿತಿ ನೀಡಿದ್ದಾರೆ. ಭಾರತ ತಂಡದ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿಯವರು ತನ್ನ ನೂರನೇ ಪಂದ್ಯವನ್ನು ಮೊಹಾಲಿಯಲ್ಲಿ ಆಡಲಿದ್ದು, ಪ್ರೇಕ್ಷಕರು ಮನೋರಂಜನೆ ಪಡೆದುಕೊಳ್ಳಬಹುದಾಗಿದೆ ಎಂದಿದ್ದಾರೆ.
ಭಾರತ ಹಾಗೂ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯ ಕೊಹ್ಲಿ ಅವರ ಪಾಲಿನ ಮಹತ್ವದ ಪಂದ್ಯವಾಗಿದೆ. ಈ ಪಂದ್ಯವನ್ನು ಪ್ರೇಕ್ಷಕರಿಲ್ಲದೆ ನಡೆಸುವುದಿಲ್ಲ. ಬದಲಾಗಿದೆ ಪ್ರೇಕ್ಷಕರನ್ನು ಮೈದಾನಕ್ಕೆ ಅನುಮತಿಸಿ ಪಂದ್ಯ ನಡೆಸಲಾಗುವುದು ಎಂದಿದೆ ಕ್ರಿಕೆಟ್ ಸಂಸ್ಥೆ.
ಈ ಹಿಂದೆ ಕೋವಿಡ್ ಕಾರಣದಿಂದಾಗಿ ವೆಸ್ಟ್ ಇಂಡೀಸ್ ಪ್ರವಾಸದಿಂದ ಈ ವರೆಗೂ ಪ್ರೇಕ್ಷಕರಿಲ್ಲದೇ ಟೂರ್ನಿ ಆಯೋಜನೆ ಮಾಡಲಾಗುತ್ತಿತ್ತು. ಆದರೆ ಇದೀಗ ದೇಶದಲ್ಲಿ ಸೋಂಕು ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.