ಮೊಹಾಲಿ, ಮಾ 05 (DaijiworldNNews/HR): ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬೌಲರ್ ಶೇನ್ ವಾರ್ನ್ ಮತ್ತು ರಾಡ್ ಮಾರ್ಷ್ ಅವರ ಸಾವಿಗೆ ಸಂತಾಪ ಸೂಚಿಸಿ ಭಾರತ ಮತ್ತು ಶ್ರೀಲಂಕಾದ ಕ್ರಿಕೆಟ್ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕೆ ಇಳಿದಿದ್ದಾರೆ.
ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ರಾಡ್ ಮಾರ್ಷ್(74 ) ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದು, ಕೆಲವೇ ಗಂಟೆಗಳಲ್ಲಿ ಥಾಯ್ಲೆಂಡ್ ಪ್ರವಾಸದಲ್ಲಿದ್ದ ಶೇನ್ ವಾರ್ನ್( 52 ) ಕೂಡ ಹೃದಯಾಘಾತದಿಂದ ನಿಧನರಾಗಿದ್ದು, ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಆಟ ಆರಂಭಿಸುವ ಮೊದಲು ಇಬ್ಬರು ಕ್ರಿಕೆಟ್ ದಿಗ್ಗಜರಿಗೆ ಒಂದು ನಿಮಿಷದ ಮೌನಾಚರಣೆ ಸಲ್ಲಿಸಲಾಯಿತು.
ಈ ಕುರಿತು ಬಿಸಿಸಿಐ ಮಾಹಿತಿ ನೀಡಿದ್ದು, ಮೊದಲ ಟೆಸ್ಟ್ನ 2ನೇ ದಿನ ಪಂದ್ಯ ಆರಂಭಿಸುವ ಮೊದಲು 1 ನಿಮಿಷದ ಮೌನಾಚರಣೆ ಸಲ್ಲಿಸುವ ಮೂಲಕ ರಾಡ್ ಮಾರ್ಷ್ ಮತ್ತು ಶೇನ್ ವಾರ್ನ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದ್ದು, ಭಾರತ ತಂಡದ ಆಟಗಾರರು ಕಪ್ಪು ಪಟ್ಟಿ ಧರಿಸಲಿದ್ದಾರೆ ಎಂದು ತಿಳಿಸಿದೆ.