ಬೆಂಗಳೂರು, ಮಾ. 14 (DaijiworldNews/SM): ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 238 ರನ್ ಗಳ ಭಾರೀ ಅಂತರದ ಗೆಲುವು ದಾಖಲಿಸಿಕೊಂಡಿದೆ.
ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 252 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ 109 ರನ್ ಗಳಿಸಿ ಸರ್ವ ಪತನ ಕಂಡಿತ್ತು. ಇನ್ನು ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಸಾಧಾರಣ ಮೊತ್ತ ಪೇರಿಸಲು ಶಕ್ತವಾಗಿದೆ. ಆ ಮೂಲಕ ಲಂಕಾ ವಿರುದ್ಧ ಬೃಹತ್ ಮೊತ್ತದ ಅಂತರ ಕಾಯ್ದುಕೊಂಡಿತು. ಇನ್ನು ಎರಡನೇ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ ತಂಡ 208 ರನ್ ಗಳಿಸಿ ಭಾರತಕ್ಕೆ ಶರಣಾಯಿತು.
ಮೊದಲ ಇನ್ನಿಂಗ್ಸ್ ನಲ್ಲಿ ಶ್ರೇಯಸ್ ಐಯ್ಯರ್ 92 ರನ್ ಸಿಡಿಸಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 67 ರನ್ ಸಿಡಿಸಿದರು. ಮೊದಲ ಇನ್ನಿಂಗ್ಸ್ ನಲ್ಲಿ ರಿಷಬ್ ಪಂತ್ 39 ರನ್ ಗಳಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 50 ರನ್ ಸಿಡಿಸಿ ಮಿಂಚಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ನಾಯಕ ರೋಹಿತ್ ಎರಡನೇ ಇನ್ನಿಂಗ್ಸ್ ನಲ್ಲಿ 46 ರನ್ ಸಿಡಿಸಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಬೂಮ್ರಾ 5 ವಿಕೆಟ್ ಪಡೆದಿದ್ದರು. ಅಶ್ವಿನ್ ಹಾಗೂ ಶಮಿ ತಲಾ 2 ವಿಕೆಟ್ ಕಬಳಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಅಶ್ವಿನ್ 4, ಬೂಮ್ರಾ 3, ಅಕ್ಷರ್ ಪಾಟೇಲ್ 2 ವಿಕೆಟ್ ಪಡೆದರು.