ನವದೆಹಲಿ, ಫೆ 18(SM): ಮೇ ತಿಂಗಳಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕಪ್ ಕ್ರಿಕೆಟ್ ಪಂದ್ಯಕ್ಕೆ ಟೀಂ ಇಂಡಿಯಾವನ್ನು ಬಹುತೇಕ ಅಂತಿಮಗೊಂಡಿದೆ. ವಿಶ್ವಕಪ್ ಟೂರ್ನಿಗೆ 18 ಆಟಗಾರರ ತಂಡ ಸಿದ್ಧಗೊಂಡಿದೆ.
ವಿಶ್ವಕಪ್ ದೃಷ್ಟಿಯಿಂದ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಪಟ್ಟಿಯಲ್ಲಿರುವ ಆಟಗಾರರು ಆಡುತ್ತಿರುವ ಐಪಿಎಲ್ ತಂಡಗಳ ಪ್ರಾಂಚೈಸಿಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ. ವಿಶ್ವಕಪ್ ನಲ್ಲಿ ಆಡುವಂತಹ ಆಟಗಾರರ ಮೇಲಾಗುವಂತಹ ಒತ್ತಂಡವನ್ನು ಕಡಿಮೆಗೊಳಿಸುವುದು ಇದರ ಉದ್ದೇಶವಾಗಿದೆ ಎನ್ನಲಾಗಿದೆ.
ಮಾರ್ಚ್ 23 ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಮೇ 30ರಿಂದ ಜುಲೈ 14ರ ವರೆಗೂ ಇಂಗ್ಲೆಂಡ್ನಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈಗಾಗಲೇ 18 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದುವೆ ಅಂತಿಮ ಪಟ್ಟಿಯಲ್ಲ. ಮುಂದಿನ ದಿನಗಳಲ್ಲಿ ಈ ಆಟಗಾರರ ಪಟ್ಟಿಯಲ್ಲೂ ಕೂಡಾ ಬದಲಾವಣೆಯಾಗುವ ಸಾಧ್ಯತೆ ಇದೆ.
ಬ್ಯಾಟಿಂಗ್ ವಿಭಾಗದಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಅಂಬಾತಿ ರಾಯುಡು, ಕೇದಾರ್ ಜಾದವ್ ಪ್ರಮುಖರಾಗಿದ್ದಾರೆ. ವಿಕೆಟ್ ಕೀಪರ್ ಗಳಾಗಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ರಿಷಬ್ ಪಂತ್, ಆಲ್ ರೌಂಡರ್ ಗಳಾಗಿ ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್ ಬಹುತೇಕ ಅಂತಿಮಗೊಂಡಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ ಕುಮಾರ್, ಜಸ್ ಪ್ರೀತ್ ಬುಮ್ರಾ, ಮಹಮ್ಮದ್ ಶಮಿ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ಅವರನ್ನು ಆಯ್ಕೆಗೊಳಿಸಲಾಗಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮುನ್ನುಗಲಿದೆ.