ನಾಗ್ಪುರ, ಮಾ 06(SM): ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಎರಡನೇ ಪಂದ್ಯದಲ್ಲಿ ಭಾರತೀಯ ಆರಂಭಿಕರು ಎಡವಿದರು. ಹಾಗೂ ಮಧ್ಯಮ ಕ್ರಮಾಂಕದಲ್ಲೂ ಕುಸಿತಕಂಡಾಗ ರನ್ ಮಿಷೆನ್ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ತಾಳ್ಮೆಯಿಂದ ಆಟವಾಡುವ ಮೂಲಕ ತಂಡಕ್ಕೆ ನೆರವಾದರು. ಹಾಗೂ ಶತಕ ಸಿಡಿಸಿ ಸಂಭ್ರಮಿಸಿದರು.
ವಿರಾಟ್ ಕೊಹ್ಲಿ ಬ್ಯಾಟಿಂಗ್ ಶೈಲಿಗೆ ಹಲವಾರು ಮಂದಿ ಫಿದಾ ಆಗಿದ್ದಾರೆ. ಕ್ರಿಕೆಟ್ ದಿಗ್ಗಜರೂ ಕೂಡ ಅವರ ಬ್ಯಾಟಿಂಗ್ ಶೈಲಿಯನ್ನು ಇಷ್ಟಪಟ್ಟಿದ್ದಾರೆ. ಟೀಂ ಇಂಡಿಯಾ ಮಾಜಿ ಆಟಗಾರರಾದ ವಿರೇಂದ್ರ ಸೆಹ್ವಾಗ್,ವಿವಿಎಸ್ ಲಕ್ಷ್ಮಣ, ಕೋಚ್ ರವಿಶಾಸ್ತ್ರಿ ಹಾಗೂ ಸುರೇಶ್ ರೈನಾ ತಂಡದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನು 2ನೇ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 40 ಶತಕಗಳ ಸರದಾರ ಎನಿಸಿಕೊಂಡಿರುವ ಕೊಹ್ಲಿ ಕ್ರಿಕೆಟ್ ದೇವರು ಸಚಿನ್ ಅವರ ನಂತರದ ಸ್ಥಾನದಲ್ಲಿದ್ದಾರೆ. ಇನ್ನು ಈ ಪಂದ್ಯದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ ಟೀಂ ಇಂಡಿಯಾ ಕಪ್ತಾನ ಕೊಹ್ಲಿ ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಆ ಮೂಲಕ 32ನೇ ಸಲ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದುಕೊಂಡಿದ್ದು, ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ. ಸೌರವ್ ಗಂಗೂಲಿ 31 ಬಾರಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇನ್ನು ಇಲ್ಲೂ ಕೂಡ ಸಚಿನ್ ಮೊದಲ ಸ್ಥಾನದಲ್ಲಿ 62 ಬಾರಿ ಪಂದ್ಯ ಶ್ರೇಷ್ಟ ಪ್ರಶಸ್ತಿ ಪಡೆದುಕೊಂಡಿದ್ದಾರೆ.