ಮುಂಬೈ, ಜ 03 (DaijiworldNews/DB): ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ವರ್ಷದ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಭರ್ಜರಿ ಸಿದ್ದತೆ ನಡೆಸುತ್ತಿದೆ. ದಸನ್ ಶನಕಾ ನೇತೃತ್ವದ ಶ್ರೀಲಂಕಾ ತಂಡದ ವಿರುದ್ದ ಮೊದಲ ಟಿ20 ಪಂದ್ಯದಲ್ಲಿ ಸೆಣಸಾಡಲು ಟೀಂ ಇಂಡಿಯಾ ರೆಡಿಯಾಗಿದೆ.
ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮುಂತಾದವರ ಅನುಪಸ್ಥಿತಿಯಲ್ಲಿ ಲಂಕಾ ಪಡೆ ವಿರುದ್ದ ಭಾರತ ತಂಡ ಸೆಣಸಾಡಲಿದೆ. ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್ ಅವರ ಮೇಲೆ ಜವಾಬ್ದಾರಿ ಹೆಚ್ಚಿದೆ.
ಇನ್ನು ಮಳೆಗಾಲದ ಹೊರತಾಗಿಯೂ ಈ ವರ್ಷ ಹಲವು ಪಂದ್ಯಗಳಿಗೆ ಚಳಿಗಾಲದಲ್ಲಿಯೂ ಮಳೆರಾಯ ಅಡ್ಡಿಯಾಗಿ ಪಂದ್ಯ ಮುಂದೂಡಲ್ಪಡುತ್ತಿತ್ತು. ಆದರೆ ಇಂದು ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಯಾಗದು ಎಂದು ಹವಾಮಾನ ಇಲಾಖೆ ತಿಳಿಸಿರುವುದರಿಂದ ನಿರಾತಂಕವಾಗಿ ಪಂದ್ಯ ನಡೆಯಲಿದೆ ಎನ್ನಲಾಗಿದೆ. ವಾಂಖೆಡೆ ಕ್ರೀಡಾಂಗಣವು ಪಿಚ್ ಬ್ಯಾಟಿಂಗ್ಗೆ ಪೂರಕವಾಗಿರುವುದರಿಂದ ಶಾರ್ಟ್ ಬೌಂಡರಿ ಸಿಡಿಸಲು ಬ್ಯಾಟರ್ಗಳಿಗೆ ಹೆಚ್ಚು ಸಹಾಯಕವಾಗಿದೆ.