ರಾಂಚಿ, ಜ 28 (DaijiworldNews/SM): ಇಲ್ಲಿನ ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಭಾರತವನ್ನು ಸೋಲಿಸಿದೆ. ಭಾರತದ ವಿರುದ್ಧ 21 ರನ್ ಗಳ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಭಾರತ ನ್ಯೂಜಿಲ್ಯಾಂಡ್ ತಂಡಕ್ಕೆ ಬ್ಯಾಟಿಂಗ್ ಗೆ ಆಹ್ವಾನ ನೀಡಿತು. ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು.
ನ್ಯೂಜಿಲ್ಯಾಂಡ್ ಪರ ಫಿನ್ ಅಲೆನ್ 35, ಡೆವೊನ್ ಕಾನ್ವೇ 52, ಗ್ಲೇನ್ ಪಿಲಿಪ್ಸ್ 17 ರನ್ ಪೇರಿಸಿದ್ದರೆ ಡೇರಿಲ್ ಮಿಚೆಲ್ ಅಜೇಯ 59 ರನ್ ಬಾರಿಸಿದರು. ಭಾರತ ಪರ ಬೌಲಿಂಗ್ ನಲ್ಲಿ ವಾಷಿಂಗ್ಟನ್ ಸುಂದರ್ 2, ಅರ್ಷ್ ದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.
ಇನ್ನು ನ್ಯೂಜಿಲೆಂಡ್ ನೀಡಿದ ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 21 ರನ್ ಗಳ ಅಂತರದಿಂದ ಸೋಲನುಭವಿಸಿತು.
ಭಾರತದ ಪರ ಶುಭ್ ಮನ್ ಗಿಲ್ 7, ಇಶಾನ್ ಕಿಶಾನ್ 4, ಸೂರ್ಯಕುಮಾರ್ ಯಾದವ್ 47, ಹಾರ್ದಿಕ್ ಪಾಂಡ್ಯ 21, ವಾಷಿಂಗ್ಟನ್ ಸುಂದರ್ 50 , ದೀಪಕ್ ಹೂಡಾ 10 ರನ್ ಗಳಿಸಿದರು. ಭಾರತೀಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬರದ ಹಿನ್ನೆಲೆಯಲ್ಲಿ ಮೊದಲ ಪಂದ್ಯ ಭಾರತ ಕೈ ಚೆಲ್ಲಿದೆ.