ಮುಂಬೈ, ಮಾ 17 (DaijiworldNews/SM): ಇಲ್ಲಿನ ವಾಂಖೇಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳಿಂದ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟೇಲಿಯಾ ಟೀಂ ಇಂಡಿಯಾದ ಮಾರಕ ದಾಳಿಯಿಂದಾಗಿ 188 ರನ್ ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ತನ್ನ ಕೊನೆಯ ಐದು ವಿಕೆಟ್ಗಳನ್ನು 19 ರನ್ಗಳೊಳಗೆ ಕಳೆದುಕೊಂಡಿತು. ಇದರಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಕಬಳಿಸಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ ಅತ್ಯಧಿಕ 81 ರನ್ ಮತ್ತು ಜೋ ಇಂಗ್ಲಿಸ್ 26 ರನ್ ಗಳಿಸಿದರು. ಆಸ್ಟ್ರೇಲಿಯಾದ ಐವರು ಬ್ಯಾಟ್ಸ್ಮನ್ಗಳು ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.
ಭಾರತದ ಪರ ರವೀಂದ್ರ ಜಡೇಜಾ 2, ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ. ಇನ್ನು ಇದಕ್ಕೆ ಉತ್ತರವಾಗಿ ಭಾರತ 39.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿ ಗೆಲುವಿನ ನಗೆ ಚೆಲ್ಲಿತು. ಭಾರತ ಪರ ಕೆ.ಎಲ್. ರಾಹುಲ್ 75, ರವೀಂದ್ರ ಜಡೇಜಾ 45 ರನ್, ಹಾರ್ದಿಕ್ ಪಾಂಡ್ಯ 25 ರನ್ ಗಳಿಸಿದರು. ಶುಬಮನಿ ಗಿಲ್ 20 ರನ್ ಗಳಿಸಿದರು. ಆ ಮೂಲಕ ಟೀಂ ಇಂಡಿಯಾ ಗೆಲುವಿನ ನಗೆ ಚೆಲ್ಲಿತು.