ಆಸ್ಟ್ರೇಲಿಯಾ, ಜೂ 03 (DaijiworldNews/MS): ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಶನಿವಾರ ಕ್ರಿಕೆಟ್ಗೆ ವಿದಾಯ ಹೇಳುವ ದಿನಾಂಕವನ್ನು ಪ್ರಕಟಿಸಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್ ವೃತ್ತಿ ಜೀವನದ ಬಗ್ಗೆಯೂ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಪಾಕಿಸ್ತಾನ ವಿರುದ್ಧ ಸಿಡ್ನಿ ಟೆಸ್ಟ್ ತಮ್ಮ ವೃತ್ತಿ ಜೀವನದ ಕೊನೆಯ ಟೆಸ್ಟ್ ಎಂದು ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್ಮನ್ ಸ್ಪಷ್ಟಪಡಿಸಿದ್ದಾರೆ.ಆಸ್ಟ್ರೇಲಿಯಾದ ಬೇಸಿಗೆಯ ಕೊನೆಯಲ್ಲಿ ಟೆಸ್ಟ್ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಪಡೆಯುವುದಾಗಿ ಡೇವಿಡ್ ವಾರ್ನರ್ ಹೇಳಿದ್ದಾರೆ. ಅಲ್ಲದೆ 2024ರ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯ ನನ್ನ ಚುಟುಕು ವೃತ್ತಿ ಜೀವನದ ಕೊನೆಯ ಪಂದ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಡೇವಿಡ್ ವಾರ್ನರ್ ತಮ್ಮ ವೃತ್ತಿಜೀವನದಲ್ಲಿ 103 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 8158 ರನ್ ಗಳಿಸಿದ್ದಾರೆ. 335 ರನ್ ಇವರ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.