ಮುಂಬೈ, ,ಆ 02 (DaijiworldNews/AK): ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಬ್ಯಾಟರ್ಗಳು ವಿಶೇಷ ದಾಖಲೆ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತ್ತು. ಮೊದಲ ವಿಕೆಟ್ಗೆ 143 ರನ್ಗಳ ಜೊತೆಯಾಟವಾಡುವ ಮೂಲಕ ಶುಭ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭ ಒದಗಿಸಿದ್ದರು. ಇನ್ನು ಈ ಪಂದ್ಯದಲ್ಲಿ ಇಶಾನ್ ಕಿಶನ್ 77 ರನ್ ಬಾರಿಸಿದರೆ, ಶುಭ್ಮನ್ ಗಿಲ್ 85 ರನ್ ಕಲೆ ಹಾಕಿದರು.
ಆ ಬಳಿಕ ಬಂದ ಸಂಜು ಸ್ಯಾಮ್ಸನ್ 51 ರನ್ಗಳ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 4 ಪೋರ್ಗಳೊಂದಿಗೆ ಅಬ್ಬರಿಸಿದ್ದ ಹಾರ್ದಿಕ್ ಪಾಂಡ್ಯ ಅಜೇಯ 70 ರನ್ ಪಡೆದರು. ಈ ಮೂಲಕ ಟೀಮ್ ಇಂಡಿಯಾ ಒಟ್ಟು 351 ರನ್ ಕಲೆಹಾಕಿತ್ತು. ಈ ಪಂದ್ಯದಲ್ಲಿ ಇಶಾನ್ ಕಿಶನ್, ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್ ಹಾಗೂ ಹಾರ್ದಿಕ್ ಪಾಂಡ್ಯ ಅರ್ಧಶತಕ ಬಾರಿಸಿ 351 ರನ್ ಪಡೆದರು.
2005 ರಲ್ಲಿ ಶ್ರೀಲಂಕಾ ವಿರುದ್ಧ ಭಾರತೀಯ ಬ್ಯಾಟರ್ಗಳು ಶತಕ ಬಾರಿಸದೇ 6 ವಿಕೆಟ್ ನಷ್ಟಕ್ಕೆ 350 ರನ್ ಕಲೆಹಾಕಿದ್ದರು.ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಶತಕಗಳಿಸದೇ ಒಟ್ಟು 351 ರನ್ಗಳಿಸಿ ಹೊಸ ದಾಖಲೆ ನಿರ್ಮಿಸಿದೆ. ವೆಸ್ಟ್ ಇಂಡೀಸ್ ತಂಡವು ಕೇವಲ 151 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ.