ನವದೆಹಲಿ, ಆ 11 (DaijiworldNews/SM): ಭಾರತ ಮತ್ತು ವಿಂಡೀಸ್ ಇದುವರೆಗೆ ವೆಸ್ಟ್ ಇಂಡೀಸ್ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದವು. ಆದರೆ ಈಗ ಉಳಿದ ಎರಡು ಪಂದ್ಯಗಳು ಫ್ಲೋರಿಡಾದ ಲಾಡರ್ಹಿಲ್ನಲ್ಲಿ ನಡೆಯಲಿವೆ. ಈ ಮೊದಲು ಉಭಯ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿನ ಅಂಕಿ-ಅಂಶಗಳಲ್ಲಿ ಭಾರತ ಪ್ರಾಬಲ್ಯ ಹೊಂದಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ20 ಪಂದ್ಯ ಶನಿವಾರ ನಡೆಯಲಿದೆ. ಈ ಪಂದ್ಯದಲ್ಲಿ ಭಾರತಕ್ಕೆ ಸರಣಿ ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ವೆಸ್ಟ್ ಇಂಡೀಸ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಟೀಂ ಇಂಡಿಯಾ (Team India) ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿತು. ತಂಡದ ಪರ ಸೂರ್ಯಕುಮಾರ್ ಯಾದವ್ (SuyraKumar Yadav) 44 ಎಸೆತಗಳಲ್ಲಿ 83 ರನ್ ಗಳಿಸಿದರೆ, ತಿಲಕ್ ವರ್ಮಾ (Tilak Varma) ಅಜೇಯ 49 ರನ್ ಗಳಿಸಿದರು. ಇದೀಗ ನಾಲ್ಕನೇ ಪಂದ್ಯವನ್ನು ಗೆಲ್ಲುವುದು ತಂಡಕ್ಕೆ ದೊಡ್ಡ ಸವಾಲಾಗಿದೆ.
ಭಾರತ ಮತ್ತು ವಿಂಡೀಸ್ ಇದುವರೆಗೆ ವೆಸ್ಟ್ ಇಂಡೀಸ್ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದವು. ಆದರೆ ಈಗ ಉಳಿದ ಎರಡು ಪಂದ್ಯಗಳು ಫ್ಲೋರಿಡಾದ ಲಾಡರ್ಹಿಲ್ನಲ್ಲಿ ನಡೆಯಲಿವೆ. ಈ ಮೊದಲು ಉಭಯ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿನ ಅಂಕಿ-ಅಂಶಗಳಲ್ಲಿ ಭಾರತ ಪ್ರಾಬಲ್ಯ ಹೊಂದಿದೆ. ಇಲ್ಲಿಯವರೆಗೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಒಟ್ಟು ಆರು ಪಂದ್ಯಗಳು ಇಲ್ಲಿ ನಡೆದಿವೆ. ಈ ಆರು ಪಂದ್ಯಗಳ ಪೈಕಿ ಭಾರತ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ ತಂಡವು ಕೇವಲ ಒಂದು ಪಂದ್ಯವನ್ನು ಗೆದ್ದಿದೆ, ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.