ಜಿಂಬಾಬ್ವೆ, ಆ 23 (DaijiworldNews/MS): ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಅನುಭವಿ ಆಲ್ರೌಂಡರ್ ಹೀತ್ ಸ್ಟ್ರೀಕ್ ಜೀವಂತವಾಗಿದ್ದಾರೆ ಎಂದು ಹೀತ್ ಸ್ಟ್ರೀಕ್ ಸ್ನೇಹಿತ ಹೆನ್ರಿ ಒಲೊಂಗಾ ಸ್ಪಷ್ಟನೆ ನೀಡಿದ್ದಾರೆ
49 ವರ್ಷದ ಹೀತ್ ಸ್ಟ್ರೀಕ್ ಕೆಲ ಸಮಯದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದು ದಕ್ಷಿಣ ಆಫ್ರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅವರ ಸಹ ಆಟಗಾರರಾಗಿದ್ದ ಹೆನ್ರಿ ಒಲಂಗಾ ಕೂಡಾ ಅವರ ಸಾವಿಗೆ ಸಂತಾಪ ಸೂಚಿಸಿ ಟ್ವಿಟ್ ಮಾಡಿದ್ದರು.
ಈ ಬಗ್ಗೆ ಅಪ್ಡೇಟ್ ಮಾಡಿರುವ ಅವರು , “ಹೀತ್ ಸ್ಟ್ರೀಕ್ ಅವರ ನಿಧನದ ವದಂತಿಗಳು ಹೆಚ್ಚು ಉತ್ಪ್ರೇಕ್ಷಿತವಾಗಿವೆ ಎಂದು ನಾನು ದೃಢೀಕರಿಸಬಲ್ಲೆ. ಮೂರನೇ ಅಂಪೈರ್ ಅವರನ್ನು ವಾಪಸ್ ಕರೆದಿದ್ದಾರೆ. ಅವರು ಜೀವಂತವಾಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 65 ಟೆಸ್ಟ್ ಮತ್ತು 189 ಏಕದಿನ ಪಂದ್ಯಗಳನ್ನು ಆಡಿರುವ ಸ್ಟ್ರೀಕ್ ಇನ್ನೂ ಜೀವಂತವಾಗಿದ್ದಾರೆ ಅನ್ನೋ ಸುದ್ದಿ ತಿಳಿದು ಕ್ರಿಕೆಟ್ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.