ನವದೆಹಲಿ, ಸೆ 11 (DaijiworldNews/SM): ಕೊಹ್ಲಿ ಅವರ ವಿರಾಟ ರೂಪ ಹಾಗೂ ರಾಹುಲ್ ಅರ್ಭಟದ ಪರಿಣಾಮ ಏಷ್ಯಾಕಪ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 356 ರನ್ ಬೃಹತ್ ಮೊತ್ತ ಪೇರಿಸಿದೆ.
ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅವರು ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರ ಶತಕಗಳ ನೆರವಿನಿಂದ 2 ವಿಕೆಟ್ ನಷ್ಟಕ್ಕೆ ನಿಗದಿತ 50 ಓವರ್ ಗಳಲ್ಲಿ 356 ರನ್ ಗಳಿಸಿದೆ.
ಸ್ಫೋಟಕ ಬ್ಯಾಟಿಂಗ್ ನಿಂದ ಮಿಂಚಿದ ಕೆಎಲ್ ರಾಹುಲ್ ತಮ್ಮ ಕಮ್ಬ್ಯಾಕ್ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ (ಔಟಾಗದೆ 122 ರನ್ ಸಿಡಿಸಿದ್ದಾರೆ. 94 ಎಸೆತ, 9 ಬೌಂಡರಿ, 3 ಸಿಕ್ಸರ್) ಹಾಗೂ ಕೆ.ಎಲ್.ರಾಹುಲ್ (ಔಟಾಗದೆ 111 ರನ್, 106 ಎಸೆತ, 12 ಬೌಂಡರಿ, 2 ಸಿಕ್ಸರ್) ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡ ಏಶ್ಯಕಪ್ನ ಸೂಪರ್-4 ಪಂದ್ಯದ ಗೆಲುವಿಗೆ ಪಾಕಿಸ್ತಾನಕ್ಕೆ 357 ರನ್ ಗುರಿ ನೀಡಿದೆ.
ಏಷ್ಯಾ ಕಪ್ ಸೂಪರ್ 4 ಹಂತದ ಪಂದ್ಯ ಮಳೆಯಿಂದಾಗಿ ನಿನ್ನೆ ಸ್ಥಗಿತಗೊಂಡಿತ್ತು. ಈ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು. ಮೀಸಲು ದಿನವಾದ ಇಂದು ಪಂದ್ಯ ಆರಂಭಕ್ಕೆ ಮತ್ತೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ವಿಳಂಬವಾಗಿ ಪಂದ್ಯ ಆರಂಭಗೊಂಡರೂ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ನಿಂದ ಪಾಕಿಸ್ತಾನಕ್ಕೆ ಬಿಗ್ ಟಾರ್ಗೆಟ್ ನೀಡಲಾಗಿದೆ.