ಹ್ಯಾಂಗ್ ಝೂ, ಅ 01 (DaijiworldNews/HR): ಹ್ಯಾಂಗ್ ಝೂನಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್ ಅವರು ಐತಿಹಾಸಿಕ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ ನಲ್ಲಿ ಗಾಲ್ಫ್ ಕ್ರೀಡೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಮೊದಲ ವನಿತಾ ಕ್ರೀಡಾಪಟು ಎಂಬ ದಾಖಲೆಗೆ ಬೆಂಗಳೂರಿನ ಅದಿತಿ ಅಶೋಕ್ ಭಾಜನರಾಗಿದ್ದಾರೆ.
ಇನ್ನು ಅದಿತಿ ಅಶೋಕ್ 7-ಸ್ಟ್ರೋಕ್ ಮುನ್ನಡೆಯೊಂದಿಗೆ ಆಟವನ್ನು ಪ್ರಾರಂಭಿಸಿದ್ದು, ್ಕೊನೆಯ ಎರಡು ಮೂರು ಹೊಡೆತದಲ್ಲಿ ಹಿನ್ನಡೆ ಅನುಭವಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.