ಹ್ಯಾಂಗ್ಝೌ, ಅ 03 (DaijiworldNews/AK): ಭಾರತದ ಪಾರುಲ್ ಚೌಧರಿ ಏಷ್ಯನ್ ಗೇಮ್ಸ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಮಂಗಳವಾರ ನಡೆದ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಪಾರುಲ್ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದ್ದಾರೆ.
ಇದರೊಂದಿಗೆ ಈ ಬಾರಿಯ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೂರನೇ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ.ಪಾರುಲ್ 3000 ಮೀಟರ್ ಓಟದಲ್ಲಿ ಭಾರತಕ್ಕೆ ಬೆಳ್ಳಿ ಪದಕವನ್ನು ಗೆದ್ದಿದ್ದರು. ಇದೀಗ 5000 ಮೀಟರ್ ರೇಸ್ನಲ್ಲಿ ಚಿನ್ನದ ಪದಕಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿಯ ಏಷ್ಯನ್ ಗೇಮ್ಸ್ನ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಇದು ಭಾರತದ ಮೂರನೇ ಸ್ವರ್ಣ ಪದಕ. ಇದಕ್ಕೂ ಮುನ್ನ ಶಾಟ್ಪುಟ್ ಆಟಗಾರ ತಜಿಂದರ್ಪಾಲ್ ಸಿಂಗ್ ತೂರ್ ಮತ್ತು ಪುರುಷರ 3000 ಮೀಟರ್ ಸ್ಟೀಪಲ್ಚೇಸ್ ವಿಜೇತ ಅವಿನಾಶ್ ಸಬ್ಲೆ ಚಿನ್ನದ ಪದಕಗಳನ್ನು ಗೆದ್ದಿದ್ದರು.