ಹ್ಯಾಂಗ್ಝೌ, ಅ 28( DaijiworldNews/SK): ಚೀನಾದ ಹ್ಯಾಂಗ್ಝೌ ನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್ ಗೇಮ್ಸ್ ನಲ್ಲಿ ಭಾರತ 10೦ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.
ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಸೆಂಚುರಿ ಬಾರಿಸಿದ್ದು, ಪ್ರಧಾನಿ ಮೋದಿ ಈ ಸಾಧನೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
2018ರ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ 72 ಪದಕ ಪಡೆದುಕೊಂಡಿರುವುದು ಭಾರತದ ಇಲ್ಲಿಯವರೆಗಿನ ಶ್ರೇಷ್ಟ ಸಾಧನೆಯಾಗಿತ್ತು. ಸದ್ಯ ಭಾರತವು 26 ಚಿನ್ನ, 29 ಬೆಳ್ಳಿ ಮತ್ತು 45 ಕಂಚಿನ ಪದಕವನ್ನು ಗೆದ್ದುಕೊಂಡಿದ್ದು, ಪಟ್ಟಿಯಲ್ಲಿ ೫ ನೇ ಸ್ಥಾನದಲ್ಲಿದೆ
ಈ ಸಾಧನೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದು, ಅಥ್ಲೀಟ್ಸ್ಗಳು ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ 100 ಪದಕಗಳನ್ನು ಗೆಲ್ಲುವ ಮೂಲಕ ದೇಶದ ಗರಿಮೆಯನ್ನು ಹೆಚ್ಚಿಸಿದ್ದಾರೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಮಾತ್ರ ಸಾಧ್ಯ. ಈ ಸಾಧನೆಗೆ ಶ್ರಮಿಸಿದ ಎಲ್ಲಾ ಕ್ರೀಡಾಪಟುಗಳು, ತರಬೇತುದಾರರು ನನ್ನ ಕೃತಜ್ಞತೆಗಳು ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.