ಕೋಲ್ಕತ್ತ, ನ 05 (DaijiworldNews/AA) : ಕೋಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ಇಂದು ವಿಶ್ವಕಪ್ನ 37ನೇ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.ಈ ಪಂದ್ಯದಲ್ಲಿ ಬಲಿಷ್ಟ ತಂಡಗಳಾದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿದೆ.
ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಪಡೆದಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಶಕ್ತಿಪ್ರದರ್ಶನಕ್ಕೆ ಈ ಪಂದ್ಯ ಸಾಕ್ಷಿಯಾಗಲಿದೆ.
ಸತತವಾಗಿ 7 ಪಂದ್ಯಗಳನ್ನು ಗೆದ್ದಿರುವ ಭಾರತ ತಂಡದ ಇಂದಿನ ಪಂದ್ಯವು ಕ್ರಿಕೆಟ್ ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ.
ಇನ್ನು ಭಾರತ ತಂಡದಲ್ಲಿ ಸ್ವಲ್ಪ ಬದಲಾವಣೆ ಮಾಡುವ ಸಾಧ್ಯತೆ ಇದೆ. ಇಂದಿನ ಪಂದ್ಯದಲ್ಲಿ ಕುಲ್ದೀಲ್ ಯಾದವ್ ಬದಲಿಗೆ ಆರ್.ಅಶ್ವಿನ್ ಗೆ ಅವಕಾಶ ನೀಡಲಾಗುತ್ತಿದೆ ಎನ್ನಲಾಗಿದೆ.ಇನ್ನು ಈ ಹಿಂದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ವಿಶ್ವಕಪ್ ನಿಂದ ಹೊರಗುಳಿಯಲಿದ್ದಾರೆ , ಅವರ ಸ್ಥಾನ ಕನ್ನಡಿಗ ಪ್ರಸಿದ್ಧ್ ಕೃಷ್ಣ ತುಂಬಲಿದ್ದಾರೆ.
ಇಂದು ನಡೆಯುವ ಭಾರತದ 8ನೇ ಪಂದ್ಯದಲ್ಲಿ ರೋಹಿತ್ ಶರ್ಮಾ (ಕ್ಯಾಪ್ಟನ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ಶಾರ್ದುಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ ಇರಲಿದ್ದಾರೆ.