ಅಹಮದಾಬಾದ್, ನ 19 (DaijiworldNews/PC): ಇಂದು ಐಸಿಸಿ ವಿಶ್ವಕಪ್ ಫೈನಲ್ ಪಂದ್ಯಾಟವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದು ಭಾರಿ ಭದ್ರತಾ ಲೋಪ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಅಭಿಮಾನಿ ಏಕಾಏಕಿ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡಿದ್ದಾನೆ. ಪ್ಯಾಲೆಸ್ಟೀನ್ ಟಿ ಶರ್ಟ್ ಧರಿಸಿದ್ದ ಅಭಿಮಾನಿಯೊಬ್ಬ ಪಂದ್ಯ ನಡೆಯುತ್ತಿರುವಾಗ ಮೈದಾನಕ್ಕೆ ನುಗ್ಗಿದ್ದು, ಬಳಿಕ ಆತನನ್ನು ಬಂಧಿಸಲಾಗಿದೆ. ಬಳಿಕ ಪಂದ್ಯವನ್ನು ಪುನರಾರಂಭಿಸಲಾಗಿದೆ.
ವಿಶ್ವಕಪ್ ಫೈನಲ್ನಲ್ಲಿ ಅಹಮದಾಬಾದ್ ನಗರ ಸೇರಿದಂತೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ದೊರೆತಿದ್ದು. ಈ ಮಧ್ಯೆಯೂ ಭದ್ರತಾ ಲೋಪ ಉಂಟಾಗಿದೆ ಎಂದು ತಿಳಿದು ಬಂದಿದೆ.