ಉತ್ತರ ಪ್ರದೇಶ: ನ 24 (DaijiworldNews/MR): ಇತ್ತೀಚೆಗೆ ನಡೆದ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋತ ಬಳಿಕ ಭಾರತೀಯ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದರು.
ವಿಶ್ವಕಪ್ ಗೆಲುವಿನ ಖುಷಿಯಲ್ಲಿರುವ, ವಿಜೇತ ತಂಡದ ಆಟಗಾರ ಮಿಚೆಲ್ ಮಾರ್ಷ್ ವಿರುದ್ಧದ ಈಗ ವಿವಾದವೊಂದು ಸೃಷ್ಟಿಯಾಗಿದೆ. ವಿಶ್ವಕಪ್ ಟ್ರೋಫಿಯ ಮೇಲೆ ಮಾರ್ಷ್ ಕಾಲುಗಳನ್ನು ಇಟ್ಟುಕೊಂಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದೀಗ ಉತ್ತರ ಪ್ರದೇಶದ ಅಲಿಗಢದಲ್ಲಿ ಆಟಗಾರನ ವಿರುದ್ಧ ದೂರು ದಾಖಲಾಗಿದೆ. ಆರ್ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ಅವರು ದೂರು ದಾಖಲಿಸಿದ್ದು, ವಿಶ್ವಕಪ್ ಟ್ರೋಫಿಯ ಮೇಲೆ ಕಾಲುಗಳನ್ನು ಇಟ್ಟು ವಿಶ್ರಾಂತಿ ಮಾಡುವ ಮಾರ್ಷ್ ಅವರ ಕೃತ್ಯವು ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳನ್ನು ತೀವ್ರವಾಗಿ ಅಸಮಾಧಾನಗೊಳಿಸಿದೆ ಎಂದು ಹೇಳಿದ್ದಾರೆ.
ಕೇಶವ್ ಅವರು ದೂರಿನ ಪ್ರತಿಯನ್ನು ಪ್ರಧಾನಿ ಮೋದಿ ಅವರಿಗೆ ಕಳುಹಿಸಿದ್ದಾರೆ. ಅಲ್ಲದೇ ಮಾರ್ಷ್ ಭಾರತದಲ್ಲಿ ಕ್ರಿಕೆಟ್ ಆಡುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.