ಮುಂಬೈ, ನ 25 (DaijiworldNews/AK): ವಿಶ್ವಕಪ್ ಟೂರ್ನಿ ಮುಗಿಯುತ್ತಿದ್ದಂತೆ ಇದೀಗ ಐಪಿಎಲ್ ಕ್ರೇಜ್ ಹೆಚ್ಚಾಗುತ್ತಿದೆ. ಅದರಲ್ಲೂ 2024ರ ಐಪಿಎಲ್ ಟೂರ್ನಿಗಳ ಬಗ್ಗೆ ಸಾಕಷ್ಟು ಕುತೂಹಲಕಾರಿ ಸಂಗತಿಗಳು ಹೊರಬಿದ್ದಿದೆ.
ಹಾಲಿ- ಮಾಜಿ ಜಾಂಪಿಯನ್ಸ್ಗಳು ಸ್ಟಾರ್ ಪ್ಲೇಯರ್ಗಳಿಗೆ ಗಾಳಹಾಕಿವೆ. ಪ್ರಮುಖ ಫ್ರಾಂಚೈಸಿಗಳು ಮತ್ತೆ ಹಳೆಯ ಆಟಗಾರರನ್ನು ಮರಳಿ ತಂದು ಟ್ರೋಫಿ ಗೆಲ್ಲಲ್ಲು ಕಸರತ್ತು ನಡೆಸುತ್ತಿವೆ.
ಈ ನಡುವೆ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜಿಗೆ ಮುಂಚಿತವಾಗಿ ಭಾರತದ ಟಿ20 ನಾಯಕ ಹಾರ್ದಿಕ್ ಪಾಂಡ್ಯ ಸುದ್ದಿಯಲ್ಲಿದ್ದಾರೆ.ಗುಜರಾತ್ ಟೈಟಾನ್ಸ್ ನಾಯಕನಾಗಿರುವ ಪಾಂಡ್ಯ ಮತ್ತೆ ಮುಂಬೈ ಇಂಡಿಯನ್ಸ್ಗೆ ಮರಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಗುಜರಾತ್ ತಂಡ ಅವರನ್ನು ಬಿಡುಗಡೆ ಮಾಡಲಿದ್ದು, ಮಿನಿ ಹರಾಜಿನಲ್ಲಿ ಮುಂಬೈ ತಂಡ ಪಾಂಡ್ಯ ಅವರನ್ನು ಖರೀದಿಸಲಿದೆ ಎನ್ನಲಾಗಿದೆ.
ಆದ್ರೆ ಈ ಬಗ್ಗೆ ಮುಂಬೈ ಇಂಡಿಯನ್ಸ್ ತಂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ಸೇರುವುದಕ್ಕೂ ಮುನ್ನ 7 ಆವೃತ್ತಿಗಳಲ್ಲಿ ಮುಂಬೈ ಪರ ಆಡಿದ್ದರು. 2022ರಲ್ಲಿ ಗುಜರಾತ್ ಟೈಟಾನ್ಸ್ ಮೊದಲ ಬಾರಿಗೆ ಪ್ರತಿನಿಧಿಸಿತು. ಟೈಟಾನ್ಸ್ ಪರ ನಾಯಕನಾಗಿ ಪ್ರತಿನಿಧಿಸಿದ ಪಾಂಡ್ಯ ತನ್ನ ಚೊಚ್ಚಲ ಆವೃತ್ತಿಯಲ್ಲೇ ತಂಡವನ್ನು ಚಾಂಪಿಯನ್ ಆಗುವಂತೆ ಮಾಡಿದರು. ಅಲ್ಲದೇ 2023ರ ಆವೃತ್ತಿಯಲ್ಲಿ ರನ್ನರ್ ಪ್ರಶಸ್ತಿ ದಕ್ಕುವಂತೆ ಮಾಡಿದರು.
ಸದ್ಯ ಹಾರ್ದಿಕ್ ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೋಗುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.