ಜ 18 (DaijiworldNews/PC): ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ದಾಖಲೆಯ ಐದನೇ ಟಿ20 ಶತಕ ಬಾರಿಸಿ ಬಳಿಕ ಸೂಪರ್ ಓವರ್ನಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಡಬಲ್ ಸೂಪರ್ ಓವರ್ ಪಂದ್ಯವನ್ನು ಗೆದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಬರೆದರು. ಅಷ್ಟೇ ಅಲ್ಲದೇ 179 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಯಾವ ಆಟಗಾರನ ಹೆಸರಲ್ಲೂ ಇಲ್ಲದ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು.
ಅಫ್ಘಾನಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ 69 ಎಸೆತಗಳಲ್ಲಿ 121 ರನ್ ಗಳಿಸಿದ್ದರು. ಇದರಲ್ಲಿ 11 ಬೌಂಡರಿ ಹಾಗೂ 8 ಸಿಕ್ಸರ್ಗಳು ಸೇರಿದ್ದವು. ಇದರೊಂದಿಗೆ ಭಾರತದಲ್ಲಿ 300 ಅಂತಾರಾಷ್ಟ್ರೀಯ ಸಿಕ್ಸರ್ಗಳನ್ನು ರೋಹಿತ್ ಪೂರೈಸಿದರು. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ 300 ಸಿಕ್ಸರ್ಗಳ ಗಡಿ ದಾಟಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾದರು.
ರೋಹಿತ್ ಶರ್ಮಾ ರವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು ಇವರು ಟಿ20ಯಲ್ಲಿ ಈ ವರೆಗೆ 90 ಸಿಕ್ಸರ್ಗಳನ್ನು ಬಾರಿಸಿದ್ದು ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.