ನವದೆಹಲಿ, ಜ 22 (DaijiworldNews/SK): ಭಾರತ ಕ್ರಿಕೆಟ್ ತಂಡದ ದಿಗ್ಗಜ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ದ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಂದ ವೈಯಕ್ತಿಕ ಕಾರಣಗಳಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸೋಮವಾರ ದೃಡಪಡಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, ವೈಯಕ್ತಿಕ ಕಾರಣಗಳಿಂದ ಮುಂಬರುವ ಇಂಗ್ಲೆಂಡ್ ವಿರುದ್ದದ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದೇನೆ ಎಂದು ವಿರಾಟ್ ಕೊಹ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದಾರೆ ಎಂದರು.
ಇನ್ನು ವಿರಾಟ್ ಅವರು ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್ ಮೆಂಟ್ ಹಾಗೂ ಆಯ್ಕೆದಾರರೊಂದಿಗೆ ಮಾತನಾಡಿದ್ದಾರೆ ಮತ್ತು ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ತನ್ನ ಪ್ರಮುಖ ಆದ್ಯತೆಯಾಗಿದೆ, ಕೆಲವು ವೈಯಕ್ತಿಕ ಸನ್ನಿವೇಶಗಳು ಅವರ ಉಪಸ್ಥಿತಿ ಮತ್ತು ಅವಿಭಜಿತ ಗಮನವನ್ನು ಬಯಸುತ್ತವೆ ಎಂದು ಬಿಸಿಸಿಐ ತಿಳಿಸಿದೆ.