ಮುಂಬೈ, ಜ 28 (DaijiworldNews/SK): ಸೌತ್ ಆಫ್ರಿಕಾ ಅಂಡರ್ 19 ತಂಡದ ಯುವ ಆರಂಭಿಕ ಆಟಗಾರ ಸ್ಟೀವ್ ಸ್ಟೋಕ್ಸ್ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ 7 ವರ್ಷಗಳ ಹಿಂದೆ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಮಾಡಿದ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದ್ದಾರೆ.
ಸ್ಕಾಟ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸ್ಟೀವ್ ಸ್ಟೋಕ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ಅಬ್ಬರಿಸಲಾರಂಭಿಸಿದ ಸ್ಟೋಕ್ ಅವರು ಖಾಸಿಂ ಖಾನ್ ಎಸೆದ 3ನೇ ಓವರ್ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸಿದ್ದು, ಅಲ್ಲದೆ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಕಿರಿಯರ ವಿಶ್ವಕಪ್ನಲ್ಲಿ ಅತೀ ವೇಗವಾಗಿ ಅರ್ಧ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ ಹೆಸರಿನಲ್ಲಿತ್ತು. 2016ರ ಅಂಡರ್-19 ವಿಶ್ವಕಪ್ನಲ್ಲಿ ನೇಪಾಳ ವಿರುದ್ಧ ಪಂತ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಸ್ಟೀವ್ ಸ್ಟೋಕ್ ಅಳಿಸಿ ಹಾಕಿದ್ದಾರೆ.