ಗುವಾಹಟಿ, ಫೆ 11 (DaijiworldNews/PC): ಅಂತರರಾಷ್ಟ್ರೀಯ ಪಂದ್ಯದಲ್ಲಿ ಅಧಿಕ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾರನ್ನು ಸಿಡಿಲಬ್ಬರದ ಶತಕ ಸಿಡಿಸಿ ಮ್ಯಾಕ್ಸ್ವೆಲ್ ಹಿಂದಿಕ್ಕಿದ್ದಾರೆ.
ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ತಮ್ಮ100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 47 ಎಸೆತಗಳಲ್ಲೇ ಶತಕ ಸಿಡಿಸಿ ಭಾರತದ ನಾಯಕ ರೋಹಿತ್ ಶರ್ಮಾ ಅವರ ಮಹತ್ತರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ಎಸೆತದಲ್ಲಿ ಬೌಂಡರಿ ಗಳಿಸಿದ ಮ್ಯಾಕ್ಸ್ವೆಲ್, ಆಸ್ಟ್ರೇಲಿಯಾದ 5 ವಿಕೆಟ್ ಗೆಲುವಿಗೆ ನೆರವು ನೀಡಿದರು.
ಪಂದ್ಯದ ಕೊನೆಯ ಓವರ್ನಲ್ಲಿ ಗೆಲ್ಲಲು ಆಸ್ಟ್ರೇಲಿಯಾಗೆ 21 ರನ್ಗಳ ಅಗತ್ಯವಿತ್ತು. ಆದರೆ ಪ್ರಸಿಧ್ ಕೃಷ್ಣ ಓವರ್ನಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ಮ್ಯಾಕ್ಸ್ವೆಲ್ ಒಂದು ಸಿಕ್ಸರ್ ಹಾಗೂ 3 ಬೌಂಡರಿಗಳೊಂದಿಗೆ ಕೊನೆಯ ಎಸೆತದಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಆಸ್ಟ್ರೇಲಿಯಾ ಪರ ಇದುವರೆಗೆ 7 ಟೆಸ್ಟ್, 138 ಏಕದಿನ ಮತ್ತು 102 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಅವರು ಟೆಸ್ಟ್ನಲ್ಲಿ 339 ರನ್ ಮತ್ತು 8 ವಿಕೆಟ್ಗಳನ್ನು ಪಡೆದಿದ್ದರೆ, ಏಕದಿನದಲ್ಲಿ 3895 ರನ್ ಮತ್ತು 70 ವಿಕೆಟ್ ಗಳನ್ನು ಪಡೆದಿದ್ದಾರೆ. ಹಾಗೆಯೇ ಟಿ20ಯಲ್ಲಿ 2405 ರನ್ ಮತ್ತು 40 ವಿಕೆಟ್ಗಳನ್ನು ಉರುಳಿಸಿದ್ದಾರೆ.